ಸಾಹಿತಿ,ಪತ್ರಕರ್ತ ಡಾ.ಬಿ.ಎನ್.ಹೊರಪೇಟಿಗೆ ಸಿದ್ಧಶ್ರೀ ಪ್ರಶಸ್ತಿ ಪ್ರದಾನ.
ಕೊಪ್ಪಳ
ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮೋರನಹಳ್ಳಿ ಗ್ರಾಮದ ಡಾ.ಬಿ.ಎನ್.ಹೊರಪೇಟಿ ಅವರು ಸಿನೆಮಾ,ಸಾಹಿತ್ಯ, ಸಂಘಟನೆ, ಸಮಾಜ ಸೇವೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡು ಸಮಾಜದ ಎಲೆಮರೆಯ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ಪರಿಚಯಿಸುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ಬಿ.ಎನ್.ಹೊರಪೇಟಿ ಅವರು ಹಳ್ಳಿಯಿಂದ ದಿಲ್ಲಿವರೆಗೂ ಎನ್ನುವಂತೆ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದು ಹೆಮ್ಮೆಯ ಸಂಗತಿ.
ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ಸೋಷಿಯಲ್ ಕ್ಲಬ್ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಅವರು ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಆಯೋಜಿಸಿದ್ದ ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಲ್ಲಿ ಡಾ.ಬಿ.ಎನ್.ಹೊರಪೇಟಿ ಅವರಿಗೆ 2024 ನೇ ಸಾಲಿನ ಪ್ರತಿಷ್ಠಿತ ಸಿದ್ಧಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಕಾರ್ಯಕ್ರಮದಲ್ಲಿ ನಾಡಿನ ಹರಗುರು ಚರಮೂರ್ತಿಗಳು ಸಂಘಟಕರಾದ ಚಂದ್ರಶೇಖರ ಮಾಡಲಗೇರಿ ಉಪಸ್ಥಿತಿ ಇದ್ದರು.