ವಿಕಸಿತ ಭಾರತ ಸಂಕಲ್ಪ ಯಾತ್ರೆ..
ಶಿವಮೊಗ್ಗ, ಬೆಳಗಾವಿ, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ
ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶಿರವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಅನಿಲ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ದೇಶದ ಬಡ ಜನರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ. ರೈತರ ಅನುಕೂಲಕ್ಕಾಗಿ ಬೇವು ಲೇಪಿತ ಯುರಿಯ ಪರಿಚಯಿಸಲಾಗಿದೆ. ಜನಧನ್ ಯೋಜನೆ ಅಡಿ ಎಲ್ಲರಿಗೂ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.
ಜಿಲ್ಲೆಯ ಹರಪನಹಳ್ಳಿ ಯ ಟೀಚರ್ಸ್ ಕಾಲೋನಿ ಹತ್ತಿರ ಜಿಲ್ಲೆ ಮಟ್ಟದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆಯಿತು.
ನೆರೆದ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿಕಸಿತ ಭಾರತದ ಸಂಕಲ್ಪ ಯಾತ್ರೆಯ ಮಹತ್ವದ ಜೊತೆಗೆ ಜನಪ್ರಿಯ ಯೋಜನೆಗಳ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹರಪನಹಳ್ಳಿಯ ಶಾಖೆಯ ವ್ಯವಸ್ಥಾಪಕರಾದ ಸೆಲ್ವಕುಮಾರ್ ಕೆ ಅವರು ಮಾಹಿತಿ ನೀಡಿದರು.
ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರು ಹಾಗೂ ಬ್ಯಾಕೋಡ್ ಗ್ರಾಮಗಳಲ್ಲಿ ವಿಕಸಿತ ಭಾರತ ರಥ ಯಾತ್ರೆಯ ಅಭಿಯಾನ ಯಶಸ್ವಿಯಾಗಿ ಜರುಗಿತು.
ಭಾರತೀಯ ಸ್ಟೇಟ್ ಬ್ಯಾಂಕಿನ ಮ್ಯಾನೇಜರ್ ಸಂದೀಪ್ ಮಟ್ಟೂ ಅವರು ಕೇಂದ್ರ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶ ಖಾನಾಪುರ ತಾಲೂಕಿನ ಕೊಡಚವಾಡ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ಜರುಗಿತು.
ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿಡಿಯೋ ಚಿತ್ರದ ಮೂಲ ಪ್ರಧಾನಮಂತ್ರಿ ವಿವಿಧ ಯೋಜನೆಗಳ ಮಾಹಿತಿ ನೀಡಲಾಯಿತು. ಉಚಿತ ಆರೋಗ್ಯ ಶಿಬಿರ ನಡೆಸಲಾಯಿತು.
ದೇಶದ ಸಮಸ್ತ ಜನರ ಅಭಿವೃದ್ಧಿಯನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಆಡಳಿತ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜನಪರವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿ ಬಡವರ ಪರ ಸರಕಾರವಾಗಿದೆ ಎಂದು ಶಾಸಕರಾದ ಸಿದ್ದು ಸವದಿ ಹೇಳಿದರು.
ಬಾಗಲಕೋಟ ಜಿಲ್ಲೆಯ ತೇರದಾಳ ಮತಕ್ಷೇತ್ರದ ಜಗದಾಳ ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು.
****