ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ನಾಗರಿಕರಿಗೆ ಉತ್ತಮ ಸೇವೆ ಕಲ್ಪಿಸಿ”
-ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ

ಯಾದಗಿರಿ : ಜನವರಿ 17, (ಕ.ವಾ) : ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೇವೆ ಕಲ್ಪಿಸಲು ಇರುವ ಸಿಬ್ಬಂದಿಗಳ ಸಮರ್ಪಕ ಬಳಕೆ ಹಾಗೂ ನಿಗದಿತ ಔಷಧೀಯ ಕೊರತೆಯಾಗದಂತೆ ನಿಗಾವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಸಂಬAಧಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬುಧವಾರ ರಂದು ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಿಸಬೇಕು, ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಅವಶ್ಯಕ ಔಷಧೀಯ ಇರುವಂತೆ ಖಾತರಿಪಡಿಸಿಕೊಳ್ಳಬೇಕು. ಇರುವ ಸಿಬ್ಬಂದಿಗಳ ಸಮರ್ಪಕ ಬಳಕೆಯಾಗುವಂತೆ ನೋಡಿಕೊಳ್ಳಬೇಕು, ಲಿಖಿತ ರೂಪದಲ್ಲಿ ಅವರ ಕರ್ತವ್ಯ ನಿಗದಿಪಡಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅದರಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಅನಿರೀಕ್ಷತವಾಗಿ ಭೇಟಿ ನೀಡಿ ಪರಿಶೀಲಿಸಬೇಕು, ಆಯಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ಔಷಧಿಗಳು ಬಗ್ಗೆ ಡೇಲಿ ಚಾರ್ಟ್ ಅಳವಡಿಸಬೇಕು ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು.

ಡಯಾಲಿಸಿನ್ ಘಟಕಗಳ ಹೆಚ್ಚಳಕ್ಕೆ ಗಮನ ನೀಡಬೇಕು, ವಿಶೇಷವಾಗಿ ಮುಂಬರುವ ಎಪ್ರಿಲ್ ಮಾಹೆಯೊಳಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಡಯಾಲಿಸಿಸ್ ಯಂತ್ರಗಳು ಟೆಕ್ನಿಶಿಯನ್‌ಗಳು ಹಾಗೂ ಸಿಬ್ಬಂದಿಗಳ ನಿಯೋಜಿಸಿ ಸೂಕ್ತ ಕ್ರಮಕೈಗೊಳ್ಳಬೇಕು, ಅವಶ್ಯಕ ಔಷಧಿಗಳ ಮಾಹಿತಿ ಒದಗಿಸುವಂತೆಯೂ ಸೂಚಿಸಿದ ಅವರು ಅವಶ್ಯಕ ಸಿಬ್ಬಂದಿ ಬಳಸಿಕೊಂಡು ಪಿಸ್ಕಿçಕ್ಷನ್ ಹೊರಗೆ ಕಳುಹಿಸದಂತೆ ಎಚ್ಚರಿಕೆ ವಹಿಸಲು ಅವರು ಸೂಚನೆ ನೀಡಿದರು.

ನಗರದ ಸರ್ಕಾರಿ ವೈದ್ಯಕೀಯ ಕಾಲೇಜದಲ್ಲಿ ಸ್ಥಾಪಿಸಬಹುದಾದ ರಕ್ತ ನಿಧಿ ಕೇಂದ್ರ ನಿಗಧಿತ ಅವಧಿಯೊಳಗೆ ಟೆಂಡರ್ ಕರೆದು ಸ್ಥಾಪಿಸಬೇಕು, ಈಗಾಗಲೇ ರಕ್ತನಿಧಿ ಸಂಗ್ರಹಣಾ ಘಟಕ ಸಮರ್ಪಕ ಕಾರ್ಯನಿರ್ವಹಿಸಿ ತುರ್ತು ರೋಗಿಗಳಿಗೆ ರಕ್ತದ ಕೊರತೆಯಾಗದಂತೆ ನಿಗಾವಹಿಸಬೇಕು, ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್.ಎಮ್.ಪಿ ವೈದ್ಯರ ಮಾಹಿತಿ ಒಳಗೊಂಡ ವರದಿ ಸಲ್ಲಿಸಬೇಕು.

ತಾಯಿ ಮಕ್ಕಳು ಹೆರಿಗೆ ಆಸ್ಪತ್ರೆಗಳಲ್ಲಿ ಸಮರ್ಪಕ ಔಷಧಿ ಇರುವಂತೆ ನೋಡಿಕೊಳ್ಳಲು ತಿಳಿಸಿದ ಅವರು ಗುರುಮಠಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸ್ರೆ ರೂಂ ಹಾಗೂ ಶಹಾಪೂರ ಆಸ್ಪತ್ರೆಗಳಲ್ಲಿ ಸಿಟಿಸ್ಕಾö್ಯನ್ ನಿರ್ವಹಣಾ ಸಿಬ್ಬಂದಿ ನೇಮಕಾತಿ ಕುರಿತು ಮಾರ್ಗೋಪಾಯಗಳನ್ನು ಹುಡುಕುವಂತೆ ಅವರು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆ ಸರ್ಜನ್ ಹಾಗೂ ಇತರೆ ಆರೋಗ್ಯಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಜನರಿಗೆ ತೊಂದರೆಯಾಗದAತೆ ನಿಗಾವಹಿಸಲು ಸೂಚಿಸಿದರು.
ರೈತರ ಬೆಳೆಹಾನಿ ಪರಿಹಾರ ಶೀಘ್ರ ವಿತರಣೆಗೆ ಕ್ರಮಕೈಗೊಳ್ಳಬೇಕು, ಜಲಜೀವನ ಮಿಷನ್ ಯೋಜನೆಯಡಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು, ನಾಲ್ಕು ಹಂತಗಳಲ್ಲಿ ಹಂತವಾರು ಮುಕ್ತಾಯಗೊಂಡ ಕಾಮಗಾರಿಗಳ ಮಾಹಿತಿ ಒದಗಿಸಬೇಕು, ರಸ್ತೆ ದುರಸ್ಥಿ ಕುರಿತು ಹಾಗೂ ಬಾಕಿ ಕಾಮಗಾರಿಗಳ ವರದಿ ನೀಡಬೇಕು, ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕುರಿತು ಕ್ರಮ ಕೈಗೊಳ್ಳಬೇಕು.

ದುರಸ್ಥಿಯಿರುವ ಹಾಗೂ ಹಸ್ತಾಂತರಗೊAಡ ಘಟಕಗಳ ಬಗ್ಗೆ ಮಾಹಿತಿ ಒದಗಿಸಬೇಕು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಪಿ.ಡಿ.ಓ ಗಳು ಹಾಗೂ ಜಿ.ಪಂ. ಉಪಕಾರ್ಯದರ್ಶಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದರು.

ವಿವಿಧ ವಸತಿನಿಲಗಯಳ ಸುವ್ಯವಸ್ಥೆಗೆ ಗಮನ ಕೋಡಿ ಅಂಗನವಾಡಿ ಕೇಂದ್ರಗಳಿಗೆ 2022-23 ರಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನ ಹೆಚ್ಚು ನೀಡಿದೆ ಸದ್ಬಳಕೆಯಾಗಬೇಕು, ಶಾಲಾಕಟ್ಟಡ ಅಂಗನವಾಡಿ ಕೇಂದ್ರಗಳ ಕಾಮಗಾರಿ ಆದ್ಯತೆ ಮೇಲೆ ಪೂರ್ಣಗೊಳಿಸಬೇಕು.

ನಿವೇಶನ ಇಲ್ಲದ ಕಡೆ ಸಮಸ್ಯೆ ಪರಿಹರಿಸಿ ಕೊಳ್ಳಬೇಕು, ಪಿ.ಆರ್.ಇಡಿ ಕೆಆರ್‌ಐ ಡಿ.ಎಲ್, ಪಿ.ಡಬ್ಲೂö್ಯ.ಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಆರ್.ಡಿ.ಪಿ.ಆರ್ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಬಾಲ್ಯ ವಿವಾಹಕ್ಕೆ ಸಂಬAಧಿಸಿದAತೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿಕೊಳ್ಳವಂತೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಸುರಪುರ ವಿಧಾನಸಭಾ ಶಾಸಕ ಶ್ರೀ ರಾಜಾ ವೆಂಕಟಪ್ಪನಾಯಕ, ಯಾದಗಿರಿ ವಿಧಾನಸಭಾ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಗುರುಮಠಕಲ್ ವಿಧಾನಸಭಾ ಶಾಸಕ ಶ್ರೀ ಶರಣಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರು ಬಿ.ಜಿ ಪಾಟೀಲ್, ಶ್ರೀ ಛಲವಾದಿ ಟಿ.ನಾರಯಣಸ್ವಾಮಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಹಜ್ ವಕ್ಫ್ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಶ್ರೀಮತಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!