ಬಿಜೆಪಿ ಪಕ್ಷದಿಂದ ದೂರ ಉಳಿದವರನ್ನು, ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆ ತನ್ನಿ :ಬಿ. ಶ್ರೀರಾಮುಲು
ಕೂಡ್ಲಿಗಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಲಾಗುವುದು ಎಂದು ಬಳ್ಳಾರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹೇಳಿದರು.
ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಬೂತ್ ವಿಜಯ ಅಭಿಯಾನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೇರೆ ಬೇರೆ ಕಾರಣಗಳಿಂದ ಬಿಜೆಪಿ ಸೋಲು ಕಂಡಿದೆ. ಕಳೆದ ಲೋಕಸಭಾ ಚುನಾವಣೆಗಳಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ಅಧಿಕ ಮತಗಳನ್ನು ಬಂದಿವೆ. ಪಕ್ಷದಿಂದ ದೂರ ಉಳಿದವರನ್ನು, ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆ ತಂದು ಬೂತ್ ಗಟ್ಟಿಯಾಗಿ ಮಾಡಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದಾಗ ಬರ ಬಂದು ಜಾನುವಾರುಗಳಿಗೂ ಮೇವು ಸಿಗುತ್ತಿಲ್ಲ. ಜನರು ಗುಳೇ ಹೋಗುತ್ತಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷ ಶಾಪವಾಗಿ ಕಾಡುತ್ತಿದೆ ಎಂದರು.ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ ರಾಜ್ಯದಲ್ಲಿಯೇ ಕಾಂಗ್ರೆಸ್ ಗ್ಯಾರಂಟಿ ಸುಳ್ಳುಗಳಿಂದ ಅಧಿಕಾರಕ್ಕೆ ಬಂದಿದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ 28 ಸೀಟುಗಳು ಗೆಲ್ಲುತ್ತೆ ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸೀಟು ಬರವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬಳ್ಳಾರಿ ಲೋಕಸಭಾ ಅಭ್ಯರ್ಥಿ ಬಿ. ಶ್ರೀರಾಮುಲು ಪ್ರಚಂಡ ಬಹುಮತದಿಂದ ಗೆಲ್ಲುವ ವಿಶ್ವಾಸದಿಂದ ನುಡಿದರು.
ಇದಕ್ಕೂ ಮೊದಲು ಮಾತನಾಡಿದ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಕಳೆದ ಮೂರು ಭಾರಿ ಚುನಾವಣೆಯಲ್ಲಿ ಹೊರಗಿನಿಂದ ಕರೆದುಕೊಂಡು ಬಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿದ್ದೇವು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿಯಾದರೂ ಸ್ಥಳೀಯರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಿದ್ದೇವು. ಆದರೆ ಎಲ್ಲೋ ಇದ್ದವರು, ಪರಿಶಿಷ್ಟ ಪಂಗಡಕ್ಕೆ ಸೇರಿದೆ ಇರುವವರಿಗೆ ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿತು. ಇದರಿಂದ ಕೂಡ್ಲಿಗಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಾಣಬೇಕಾಯಿತು.ಮನದಾಳದ ಮಾತಿನಲ್ಲಿ ಮುಂದಿನ ಚುನಾವಣೆಯಲ್ಲಾದರೂ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.ಈ ಸಂಧರ್ಭದಲ್ಲಿದ್ದ
ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿಗಳಾದ ಸೂರ್ಯಪಾಪಣ್ಣ, ಓದೋ ಗಂಗಪ್ಪ, ಮಂಡಲ ಅಧ್ಯಕ್ಷ ಕಾಮಶೆಟ್ಟಿ ನಾಗರಾಜ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಎಚ್. ರೇವಣ್ಣ, ಮುಖಂಡರಾದ ಸಿದ್ದಾರ್ಥ ಸಿಂಗ್, ಮೊರಬ ಶಿವಣ್ಣ,ಬಿ. ಬೀಮೇಶ್, ಎಸ್. ದುರುಗೇಶ್,ರಜನಿಕಾಂತ್ ಸಾಣೆಹಳ್ಳಿ ಹನುಮಂತು, ಬಿ.ಮಂಜುನಾಥ,ರೇಖಾ ಇನ್ನು ಇತರರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೋಟ್,
ಸುದ್ದಿಗಾರರೊಂದಿಗೆ ಪ್ರಶ್ನೆಗಳಿಗೆ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸೀಟು ಗೆಲ್ಲುತ್ತದೆವೆಂಬ ಪ್ರಶ್ನೆಗೆ ಬಿಜೆಪಿ ಪಕ್ಷ 25 ಸೀಟು ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ ಎಂದು ಸಿದ್ದರಾಮಯ್ಯನವರಿಗೆ ಸವಾಲ್ ಹಾಕಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್.