ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ..
ವಿಜಯನಗರ: ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆಯ ನಗರಸಭೆ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸನ್ಮಾನ್ಯ ಶಾಸಕರಾದ ಶ್ರೀ ಹೆಚ್.ಆರ್.ಗವಿಯಪ್ಪ ಅವರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಶಾಸಕರಾದ ಶ್ರೀ *ಹೆಚ್.ಆರ್.ಗವಿಯಪ್ಪ* ತಮ್ಮ ಭಾಷಣದಲ್ಲಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಬೋಧನೆಗಳು ಮತ್ತು ಮೌಲ್ಯಗಳನ್ನು ಒತ್ತಿ ಹೇಳಿದರು, ಏಕತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಎತ್ತಿ ತೋರಿಸಿದರು. ಶ್ರೀ ಗವಿಯಪ್ಪ ಅವರು ಯುವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.