ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರು ನೀಡಿದ ಸೂಚನೆಗಳು

– ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ.

– ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

– ಯೋಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

– ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

– ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.

– 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.

– ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.

– ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.

– ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!