ಗದಗ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಗದಗ, ಸೆ. 23: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 24 ರಂದು ಪ್ರವಾಸ ಕೈಗೊಳ್ಳಲಿದ್ದು ಪ್ರವಾಸ ವಿವರ ಇಂತಿದೆ.
ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಅಸುಂಡಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು. ಬೆಳಿಗ್ಗೆ 11 ಗಂಟೆಗೆ ಗದಗ ನಗರದ ಕಾರವಾರ ಇಲಕಲ್ಲ ರಾಜ್ಯ ರಸ್ತೆಯ ಗದಗ ಭೀಷ್ಮಕೆರೆ ಹತ್ತಿರದ ಬನ್ನಿಕಟ್ಟಿ ರಸ್ತೆ ಸುರಕ್ಷತಾ ಕಾಮಗಾರಿಗೆ ಚಾಲನೆ ನೀಡುವರು.
ಬೆಳಗ್ಗೆ 11:30 ರಿಂದ 12:30 ರವರೆಗೆ ಗದಗ-ಬೆಟಗೇರಿಯ ವಾರ್ಡ್ ನಂಬರ್ 6, 9 ಹಾಗೂ 10 ರಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.
ಮಧ್ಯಾಹ್ನ 1 ಗೆ ಕಳಸಾಪುರ ರಸ್ತೆಯ ಇಂಡಿಯನ್ ಬ್ಯಾಂಕ್ ಹತ್ತಿರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವರು.
ನಂತರ ಸಂಜೆ 6:30 ಗಂಟೆಗೆ ಗದಗನಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸಿ, ಅಲ್ಲಿಂದ ವಿಮಾನ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.