ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವಲ್ಲಿ ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯ: ನ್ಯಾ. ಶಶಿಧರ್ ಶೆಟ್ಟಿ
—-
ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಜನರ ಸಮಸ್ಯೆಗಳನ್ನು ತಿಳಿಯಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ, ಕಾನೂನಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಲುಪಿಸುವಲ್ಲಿ ಅರೆ ಕಾನೂನು ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯವಾದದ್ದು, ಹಾಗಾಗಿ ರಾಜ್ಯದ ಎಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಸ್ವಯಂ ಸೇವಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ನ್ಯಾ. ಶಶಿಧರ್ ಶೆಟ್ಟಿ ಹೇಳಿದರು.
ಅವರು ಮಂಗಳವಾರ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಛೇರಿ, ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಆನ್ ಲೈನ್ ಸಭೆ ನಡೆಸಿ ಮಾತನಾಡಿದರು.
ಹಳ್ಳಿಯಲ್ಲಿ ಇನ್ನೂ ಹಲವಾರು ಜನರಿಗೆ ಜನನ ನೋಂದಣಿ ಹೇಗೆ ಮಾಡಿಸಬೇಕೆಂಬ ಮಾಹಿತಿ ಇಲ್ಲ. ಮಕ್ಕಳು ಕಳೆದು ಹೋದಾಗ ತಕ್ಷಣ ಮಾಹಿತಿ ಬಂದರೆ ಮಕ್ಕಳ ಕಲ್ಯಾಣ ಇಲಾಖೆಗೆ ಹಾಗೂ ಪೊಲೀಸ್ ಇಲಾಖೆಗಳಿಂದ ಸಹಾಯವನ್ನು ಪಡೆದು ಮಕ್ಕಳನ್ನು ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಕೆಲವೊಂದು ಪ್ರಕರಣಗಳಲ್ಲಿ ಮಾನಸಿಕ ಅಸ್ವಸ್ಥರನ್ನು ಮನೆಯಲ್ಲಿ ಕೂಡಿ ಹಾಕಿರುತ್ತಾರೆ. ಅಂತಹವರನ್ನು ಆಶಾ, ಅಂಗನವಾಡಿ ಕಾರ್ಯಕರ್ತರು ಮತ್ತು ಅರೆ ಕಾನೂನು ಸ್ವಯಂ ಸೇವಕರ ಮೂಲಕ ಮಾಹಿತಿ ಪಡೆದು ಅವರನ್ನು ರಕ್ಷಣೆ ಮಾಡಲಾಗುತ್ತದೆ.
ಇನ್ನೂ ಬಹಳಷ್ಟು ಹಳ್ಳಿಯ ಜನರಿಗೆ ಅವರು ಎಲ್ಲಿ ಹೋಗಿ ಮಾಹಿತಿ ಪಡೆಯಬೇಕು ಎನ್ನುವ ಅರಿವು ಇರುವುದಿಲ್ಲ. ಈ ಕೆಲಸವನ್ನು ಅರೆ ಕಾನೂನು ಸ್ವಯಂ ಸೇವಕರು ಮಾಡಬೇಕು. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಕಾನೂನು ಅರಿವು ನೆರವಿನ ಮಾಹಿತಿ ಜನರಿಗೆ ತಿಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ. ಹಳ್ಳಿಯಲ್ಲಿ ಇನ್ನೂ ಕೆಲವು ಕಡೆ ಅಲ್ಲಲ್ಲಿ ಬಾಲ್ಯ ವಿವಾಹಗಳು ನಡೆಯುತ್ತವೆ. ಅವುಗಳ ಮಾಹಿತಿಯನ್ನು ನಮ್ಮ ಸ್ವಯಂ ಸೇವಕರಿಂದ ಪಡೆದು ಅವುಗಳನ್ನು ನಿಲ್ಲಿಸಬಹುದು ಎಂದರು.
ಕೌಟುಂಬಿಕ ಕಲಹ, ಸಣ್ಣಪುಟ್ಟ ವಿಚಾರದ ಕಲಹಗಳನ್ನು ಕೋರ್ಟ್ ಮೆಟ್ಟಿಲು ಏರದೆ ಇಬ್ಬರು ಪಕ್ಷಗಾರರ ಸಮ್ಮುಖದಲ್ಲಿ ಪರಿಹಾರ ಆಗುವಂತಾಗಬೇಕು. ಬಾಲ ಕಾರ್ಮಿಕರು ಇಟ್ಟಂಗಿ ಭಟ್ಟಿ, ಅಗರಬತ್ತಿ ಕಾರ್ಖಾನೆ, ಹೋಟೆಲ್ ಸೇರಿದಂತೆ ಇತರೆ ಕಡೆಗಳಲ್ಲಿ ಕಂಡುಬರುತ್ತಾರೆ. ಅವರನ್ನು ಪತ್ತೆಹಚ್ಚಿ ಮುಖ್ಯ ವಾಹಿನಿಗೆ ತಂದು ಅವರಿಗೆ ಸಹಾಯ ಮಾಡಬೇಕು. ಇಂತಹ ಸೇವಾ ಮನೋಭಾವವುಳ್ಳ ಕಾರ್ಯಗಳ ಬಗ್ಗೆ ಆಸಕ್ತಿ ಹೊಂದಿದವರು ಸ್ವಯಂ ಇಚ್ಚೆಯಿಂದ ಅರೆ ಕಾನೂನು ಸ್ವಯಂ ಸೇವಕರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಇದಕ್ಕೆ ಯಾವುದೇ ಸಂಬಳ ಇರುವುದಿಲ್ಲ. ಅಕ್ಟೋಬರ್ 20 ರವರೆಗೆ ರಾಜ್ಯದಲ್ಲಿ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶವಿದೆ ಎಂದರು.
ನಿವೃತ್ತ ಶಿಕ್ಷಕರು, ಮಾಜಿ ಪಂಚಾಯತ ಸದಸ್ಯರು, ನಿವೃತ್ತ ಸರಕಾರಿ ನೌಕರರು, ತೃತೀಯ ಲಿಂಗಿಗಳು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಕಾನೂನು ವಿದ್ಯಾರ್ಥಿಗಳು, ಮಹಿಳಾ ಸಂಘಗಳ ಸದಸ್ಯರು, ನಿವೃತ್ತ ಸೈನಿಕರು ಸೇರಿದಂತೆ ಇತರರು ಅರೆ ಕಾನೂನು ಸ್ವಯಂ ಸೇವಕರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕೆ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 4 ವರೆಗೆ ಕಾಲಾವಕಾಶವಿದ್ದು ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ ಎಂದರು.
ಈ ಆನ್‌ಲೈನ್ ಸಭೆಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಕಛೇರಿಯ ಶ್ರೀಧರ್ ಬಾಲಸುಬ್ರಹ್ಮಣ್ಯಂ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!