*ಮುಖ್ಯಮಂತ್ರಿಗಳ ಸಿಟಿ ರೌಂಡ್ಸ್:*ಮುಖ್ಯಾಂಶಗಳು*

ಬೆಂಗಳೂರು,: ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಬಳಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆಯಲ್ಲಿ ನೀರು ನಿಲ್ಲದೆ ಸರಾಗವಾಗಿ ಹರಿದು ಒಳಚರಂಡಿ ಸೇರುವಂತೆ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ .
* ವಿಡ್ಸಂರ್ ಮ್ಯಾನರ್ ವೃತ್ತದಲ್ಲಿನ ರಸ್ತೆ ಕಾರ್ಯ , ರಾತ್ರಿಯಲ್ಲಿ ಮುಗಿಸಬೇಕು ಎಂದು ಅಧಿಕಾರಿಗಳು ಸೂಚನೆ
* ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ್ದು, ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸುವಂತೆ ಸೂಚನೆ.
* ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಬಿಬಿಎಂಪಿ, ಬಿಡಿಎ ಮತ್ತು ಪೊಲೀಸರಿಗೆ ಸೂಚನೆ.
* ಮೆಟ್ರೋ ಕಾಮಗಾರಿ ನಡೆಯುವ ಸಂದರ್ಭಗಳಲ್ಲಿ ಮೆಟ್ರೋ ಸಿಬ್ಬಂದಿ ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಬಾರದು. ರಸ್ತೆ ಬದಿ ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹಾಳಾಗಿರುವ ವೈಟ್ ಟಾಪಿಂಗ್ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆ ಮಾಡುವಂತೆ ಸೂಚನೆ .
* ಮೆಟ್ರೋ ಕಾಮಗಾರಿ ನಡೆಯುವಾಗ ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಸಲ್ಲದು. ಈ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸೂಚಿಸಿದರು.
* ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ ತಲೆ ಎತ್ತರಕ್ಕೆ ಗಿಡಗಳು ಬೆಳೆದಿವೆ. ಹಳೆ ತ್ಯಾಜ್ಯವಾಗಿದ್ದು, 24 ಗಂಟೆಗಳ ಒಳಗೆ ತ್ಯಾಜ್ಯ ತೆರವುಗೊಳಿಸುವಂತೆ ಸೂಚನೆ .
* ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕು ಒಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ.
* ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು.
* ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸೂಚನೆ.

ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ.

ಪಣತ್ತೂರು T ಕ್ರಾಸ್ ಬಳಿ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯ: ಸಿಸಿಟಿವಿ ಅಳವಡಿಸಿ ಕ್ರಮ ಕೈಗೊಳ್ಳಲು ಮತ್ತು ಬಿಬಿಎಂಪಿ ಮಾರ್ಷಲ್ ಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ತ್ಯಾಜ್ಯ ಸುರಿಯುತ್ತಿರುವವರವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳದಲ್ಲಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದ್ದು, ಈ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು.

ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣ ಹೆಣ್ಣೂರು ಬಾಗಲೂರು ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ನ್ನು ಅಮಾನತ್ತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಹಾಗೇ ಬಿಟ್ಟಿದ್ದ ಕಾರಣ, ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಹೆಣ್ಣೂರು ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ನಿರ್ವಹಣೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. 5 ಕಿ.ಮೀ. ರಸ್ತೆ ಕಾಮಗಾರಿಯನ್ನು ಕಿ.ಮೀ. ಒಂದಕ್ಕೆ 13 ಕೋಟಿಗಳನ್ನು ಸರ್ಕಾರ ವ್ಯಯಿಸುತ್ತಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ರಸ್ತೆಗಳಲ್ಲಿ ಯಾವುದೇ ಗುಂಡಿಗಳಿಲ್ಲದಂತೆ ಮುಚ್ಚಬೇಕೆಂದು ಸೂಚನೆ ನೀಡಲಾಗಿದೆ

ರಸ್ತೆ ಗುಂಡಿಗಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಗುಂಡಿಗಳ ದುರಸ್ತಿ ನಡೆದಿದ್ದರೆ, ರಸ್ತೆಗಳು ಇಂತಹ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಮಳೆಗಾಲ ಮುಗಿಯುವುದರೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಬೇಕು.

ರಸ್ತೆಗಳ ಕೆಲೆವೆಡೆಗಳಲ್ಲಿ ತ್ಯಾಜ್ಯವನ್ನು ನಿರ್ವಹಿಸದೇ ಹಾಗೇ ಬಿಟ್ಟಿದ್ದು, ತ್ಯಾಜ್ಯವನ್ನು ತ್ವರಿತವಾಗಿ ತೆಗೆಯಬೇಕೆಂದು ಸೂಚನೆ ನೀಡಲಾಗಿದ್ದು,, ಇಲ್ಲವಾದಲ್ಲಿ ಸಂಬಂಧಪಟ್ಟ ಕಮೀಷನರ್ ಹಾಗೂ ಇಂಜಿನಿಯರ್ ಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!