*ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ*

*ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ*

*ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಅಕ್ಟೋಬರ್ 1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

*ಉತ್ತರಕರ್ನಾಟಕದಲ್ಲಿ ಹೆಚ್ಚು ಪ್ರವಾಹ*
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.
*ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ*
ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು.

*ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ*
ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!