*ಪೂರ್ವಭಾವಿ ಸಭೆ | ಪ್ಲಾಸ್ಟಿಕ್ ಧ್ವಜ ಬಳಕೆ ಸಂಪೂರ್ಣ ನಿಷೇಧ*ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ :

  1. ಬಾಗಲಕೋಟೆ: ಜನವರಿ 04 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ತಿಳಿಸಿದರು.
    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
    ಪಥಸಂಚಲನ ಕಾರ್ಯಕ್ರಮದಲ್ಲಿ ಪೋಲಿಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್‍ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಕಾರ್ಯಕ್ರಮಗಳ ಸಿದ್ದತೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.
    ಸಂಪೂರ್ಣವಾಗಿ ಪ್ಲಾಸ್ಟಿಕ್ ದ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಶಾಸಕರಿಗೆ, ಸಂಸದರುಗಳಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆಯನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಡಳಿತ ಭವನ ಹಾಗೂ ತಾಲೂಕ ಭವನಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ರಾಷ್ಟ್ರಕವಿ ಕುವೆಂಪುರವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣಿತ ಕಲಾವಿದರಿಂದ ಹಾಡಿಸಲು ತಳಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆಯನ್ನು ಮಾಡುವಂತೆ ವಾಯವ್ಯ ರಾಜ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದರು.
    ಸದರಿ ದಿನದಂದು ಪೋಲಿಸ್ ಬಂದೂಬಸ್ತಿ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಲಾಯಿತು. ರಾಷ್ಟ್ರೀಯ ಕಾರ್ಯಕ್ರಮವಾಗಿರುವದರಿಂದ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಕರೆ ನೀಡಿದರು.
    ಸಭೆಯಲ್ಲಿ ಯುಕೆಪಿ ಡಿಜಿಎಂ ಎಸ್.ಪಿ.ಘಂಟಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
    ಛಾಯಾಚಿತ್ರ ಲಗತ್ತಿಸಿದೆ. 1 ಮತ್ತು 2

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!